ಸುಳ್ಯದ ರಂಗಮಯೂರಿ ಕಲಾ ಶಾಲೆಯಲ್ಲಿ ಯಕ್ಷಗಾನ ಗೋಷ್ಠಿಯ ಉದ್ಘಾಟನೆ- ವಿಚಾರಗೋಷ್ಠಿ ಮಂಡನೆ

0

ಸುಳ್ಯದ ರಂಗಮಯೂರಿ ಕಲಾ ಶಾಲೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದಲ್ಲಿ ಯಕ್ಷಗಾನ ಕವಿಗೋಷ್ಠಿಯ ಉದ್ಘಾಟನೆಯು ಜು.6 ರಂದು ನಡೆಯಿತು.

ಹಿರಿಯ ಉದ್ಯಮಿ ಶ್ರೀ ಹರಿ ಕಾಂಪ್ಲೆಕ್ಸ್ ಮಾಲಕ ಕೃಷ್ಣ ಕಾಮತ್ ಅರಂಬೂರು ರವರು ದೀಪ ಪ್ರಜ್ವಲಿಸಿದರು.
ಹಿರಿಯ ಸಾಹಿತಿ ಯಕ್ಷಗಾನ ಕಲಾವಿದ ಡಾ.ಪ್ರಭಾಕರ ಶಿಶಿಲ ಅಧ್ಯಕ್ಷತೆ ವಹಿಸಿದ್ದರು.
ಲೇಖಕರು ಯಕ್ಷಗಾನ ಕಲಾವಿದ ನಾರಾಯಣ ದೇಲಂಪಾಡಿ ಯವರು ಯಕ್ಷ ಸಂಘಟನೆಯ ಸವಾಲುಗಳು ಮತ್ತು ಪರಿಹಾರ ವಿಷಯದ ಕುರಿತು ವಿಚಾರ ಮಂಡಿಸಿದರು.
ಲೇಖಕರು, ಸಂಶೋಧಕ
ಡಾ.ಸುಂದರ ಕೇನಾಜೆ ಯವರು ಯಕ್ಷಗಾನವನ್ನು ತಲೆಮಾರಿಗೆ ವರ್ಗಾಯಿಸುವ ಸಾಧ್ಯತೆಗಳ ವಿಷಯದ ಕುರಿತು ವಿಚಾರ ಮಂಡಿಸಿದರು. ಪೋಷಕ ಕಮಿಟಿ ಸದಸ್ಯ ಭವಾನಿ ಶಂಕರ ಅಡ್ತಲೆ,
ರಂಗಮಯೂರಿ ಕಲಾ ಶಾಲೆಯ ಸಂಚಾಲಕ ಲೋಕೇಶ್ ಊರುಬೈಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಂಗಮಯೂರಿ ಕಲಾ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು.
ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು.