ಕೃಷಿಕನ ಮನೆಗೆ ಇಂದು ಸಚಿವ ದಿನೇಶ್ ಗುಂಡೂರಾವ್ ಮತ್ತು ಮಾಜಿ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ
5 ಲಕ್ಷ ಪರಿಹಾರ ಘೋಷಣೆ
ಅಡಿಕೆ ಕೃಷಿಗೆ ಎಲೆ ಹಳದಿ ರೋಗ ಬಾಧಿಸಿದ ಪರಿಣಾಮ ಕೃಷಿ ನಾಶಗೊಂಡಿದ್ದು ಮನನೊಂದ ಕೃಷಿಕ ಮಡಪ್ಪಾಡಿ ಬಲ್ಕಜೆ ಸೀತಾರಾಮ ಎಂಬವರು 4 ದಿನದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಮತ್ತು ಮಾಜಿ ಎಂ.ಎಲ್.ಸಿ. ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಇಂದು ಮಧ್ಯಾಹ್ನ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.
ಇದೇ ಸಂದರ್ಭದಲ್ಲಿ ಸರಕಾರದಿಂದ 5 ಲಕ್ಷ ಪರಿಹಾರ ಕೊಡಿಸುವುದಾಗಿ ಹೇಳಿದರಲ್ಲದೇ, ಮನೆ ದುರಸ್ತಿಯನ್ನು ಸರಕಾರದ ವತಿಯಿಂದ ಮಾಡಿಸುವುದಾಗಿ ಹೇಳಿ ಮನೆಯವರಿಗೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ತಹಶೀಲ್ದಾರ್ ಮಂಜುನಾಥ್, ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಮಡಪ್ಪಾಡಿ ಗ್ರಾ.ಪಂ. ಅಧ್ಯಕ್ಷೆ ಉಷಾ ಜಯರಾಮ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಹಾನ, ಪಿಡಿಓ ರವಿಚಂದ್ರ, ಮಡಪ್ಪಾಡಿ ಸೊಸೈಟಿ ಉಪಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಕೆಪಿಸಿಸಿ ಮಾಜಿ ಸದಸ್ಯ ವೆಂಕಪ್ಪ ಗೌಡ, ಮಡಪ್ಪಾಡಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ಮತ್ತಿತರರಿದ್ದರು.