ಪರಿವಾರಕಾನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದ ತ್ರೈಮಾಸಿಕ ಸಭೆ

0

ವಿಶ್ವತಂಬಾಕು ವಿರೋಧಿ ದಿನಾಚರಣೆ ಹಾಗೂ ಮಾಹಿತಿ ಕಾರ್ಯಕ್ರಮ

ಸುಳ್ಯ ತಾಲೂಕಿನ ಸುಳ್ಯ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪರಿವಾರಕಾನ ಒಕ್ಕೂಟದ ತ್ರೈಮಾಸಿಕ ಸಭೆ ಮತ್ತು ವಿಶ್ವ ತಂಬಾಕು ವಿರೋಧಿ ದಿನಾಚರಣೆಯು ಜು.7ರಂದು ನಡೆಯಿತು.


ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಲೋಕನಾಥ ಅಮೆಚೂರು ಅವರು ಉದ್ಘಾಟಿಸಿ, ವಿಶ್ವತಂಬಾಕು ವಿರೋಧಿ ದಿನದ ಉದ್ದೇಶ ಮತ್ತು ತಂಬಾಕು ಇದರ ಉಪ ಉತ್ಪನ್ನಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳು ಹಾಗೂ ಈ ವಿಚಾರದಲ್ಲಿ ಜನಜಾಗೃತಿ ವೇದಿಕೆಯ ಜವಾಬ್ದಾರಿಗಳ ಬಗ್ಗೆ ತಿಳಿಸಿದರು. ಪರಿವಾರಕಾನ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಸರಳಿಕುಂಜ ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಸುವಚ ಕ್ಲಿನಿಕ್ಕಿನ ಆಯುರ್ವೇದ ವೈದ್ಯರಾದ ವೆಂಕಟೇಶ್ವರ ಭಟ್ ಅವರು ತಂಬಾಕು ಹಾಗೂ ಇತರ ಉತ್ಪನ್ನಗಳ ಸೇವೆಯಿಂದ ದೇಹಕ್ಕೆ ಹಾಗೂ ಆರೋಗ್ಯಕ್ಕೆ ಮತ್ತು ಸಮಾಜಕ್ಕೆ ಆಗುವ ತೊಂದರೆಗಳ ಕುರಿತು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ, ಸುಳ್ಯ ತಾಲೂಕಿನ ಯೋಜನಾಧಿಕಾರಿ ಮಾಧವ ಅವರು ಮಾಹಿತಿಯನ್ನು ನೀಡಿ ಬಡ್ಡಿದರ ಮೊತ್ತ ಪಿ. ಆರ್. ಕೆ. ಸಂಪೂರ್ಣ ಸುರಕ್ಷಾ ಮರುಪಾವತಿ ಚೀಟಿ ಸದಸ್ಯರ ಮಿತಿ ಕುಟುಂಬದ ಮಿತಿ ಇನ್ನಿತರ ವಿಷಯದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸುಳ್ಯ ವಲಯದ ಮೇಲ್ವಿಚಾರಕಿ ಶ್ರೀಮತಿ ಜಯಶ್ರೀ, ಒಕ್ಕೂಟದ ಉಪಾಧ್ಯಕ್ಷ ಚಂದ್ರಶೇಖರ ಹಾಗೂ ಜಗದೀಶ ಒಕ್ಕೂಟದ ಕಾರ್ಯದರ್ಶಿಯಾದ ಪೂರ್ಣಿಮಾ ಜೊತೆ ಕಾರ್ಯದರ್ಶಿ ಹಿಮಕರ, ಕೋಶಾಧಿಕಾರಿ ಯೋಗೀಶ್, ಪರಿವಾರಕಾನ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸುರೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಒಕ್ಕೂಟದ ಎಲ್ಲಾ ಸಂಘದ ಸದಸ್ಯರುಗಳು ಈ ವೇಳೆ ಉಪಸ್ಥಿತರಿದ್ದರು.