ಸುಳ್ಯದದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

0

400 ಕ್ಕೂ ಮಿಕ್ಕಿ ರೋಗಿಗಳ ಉಚಿತ ತಪಾಸಣೆ – ಕನ್ನಡಕ ವಿತರಣೆ

ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಪುತ್ತೂರು ಇದರ ಸಹಸಂಸ್ಥೆ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಸುಳ್ಯದ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಮಾಜ, ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಮಂಡಳಿ, ಶ್ರೀ ದುರ್ಗಾಪರಮೇಶ್ವರಿ ಚಾರಿಟೇಬಲ್ ಟ್ರಸ್ಟ್ ನ ಸಹಭಾಗಿತ್ವದಲ್ಲಿ
ಎ ಜೆ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಹಿರಿಯ ಉದ್ಯಮಿ
ದಿ. ಉಪೇಂದ್ರ ಅನಂತ ಕಾಮತ್ ರವರ ಸ್ಮರಣಾರ್ಥ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ಜು. 7 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರವನ್ನು ಏರ್ಪಡಿಸಲಾಯಿತು.

ಸುಳ್ಯ ತಾಲೂಕು ಆರೋಗ್ಯಾಧಿಕಾರಿ
ಡಾ. ನಂದಕುಮಾರ್ ಬಿ ದೀಪಪ್ರಜ್ವಲಿಸಿಉದ್ಘಾಟಿಸಿದರು.
ಸರಸ್ವತಿ ಚಾರಿಟೇಬಲ್ ಟ್ರಸ್ಟಿಕೆ.ಆರ್.ಗೋಪಾಲಕೃಷ್ಣ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಗಣೇಶ್ ಕ್ಯಾಶ್ಯೂ ಇಂಡಸ್ಟ್ರೀಸ್‌ ಮಾಲಕ ಸುಧಾಕರ ಕಾಮತ್ ಅಡ್ಕಾರ್, ಮಾಜಿ ವಿಧಾನ ಪರಿಷತ್ ಸದಸ್ಯ ವಿನಯಚಂದ್ರ ಕಿಲಂಗೋಡಿ, ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಮಾಜದ ಅಧ್ಯಕ್ಷ ಹೇಮಂತ್ ಕುಮಾರ್ ಕಂದಡ್ಕ,ಶ್ರೀದುರ್ಗಾಪರಮೇಶ್ವರಿ ಮಹಿಳಾ ಮಂಡಳಿ ಅಧ್ಯಕ್ಷೆ ಶ್ರೀಮತಿ ಅನಿತಕೆ,ಶ್ರೀಭಾಲಾವಲೀಕಾರ್ ರಾಜಾಪುರ ಸಾರಸ್ವತ ಯವ ಸಮಾಜದ ಉಪಾಧ್ಯಕ್ಷ ವಾಸುದೇವ ನಾಯಕ್ ಉಪಸ್ಥಿತರಿದ್ದರು.

ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಪುತ್ತೂರು ಇದರ ಉಪಾಧ್ಯಕ್ಷ ಉಮೇಶ್ ಪ್ರಭು ಕೆ ಸಹಕಾರಿ ಬೆಳವಣಿಗೆಯ ಕುರಿತು ಮಾಹಿತಿ ನೀಡಿದರು.

ಶಿಬಿರದಲ್ಲಿ 400ಕ್ಕೂ ಅಧಿಕ ಜನರು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು. ಅವಶ್ಯವಿದ್ದ 170 ಜನರಿಗೆ ಉಚಿತವಾಗಿ ಕನ್ನಡಕವನ್ನು ವಿತರಿಸಲಾಯಿತು. ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ಕಿವಿ, ಮೂಗು, ಗಂಟಲು ತಪಾಸಣೆ, ಚರ್ಮ ತಪಾಸಣಾ ವಿಭಾಗ, ಎಲುಬು ಮತ್ತು ಕೀಲು ತಪಾಸಣಾ ವಿಭಾಗ, ನೇತ್ರ ತಪಾಸಣಾ ವಿಭಾಗಗಳಲ್ಲಿ ತಜ್ಞ ವೈದ್ಯರು ತಪಾಸಣೆ ನಡೆಸಿದರು.

ಕು. ದೀಪಾ ಪ್ರಾರ್ಥಿಸಿದರು, ಸಂಸ್ಥೆಯ ಹಿರಿಯ ವ್ಯವಸ್ಥಾಪಕ ದೇವಿಪ್ರಸಾದ್ ಎ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.
ಸುಳ್ಯ ಶಾಖೆಯ ವ್ಯವಸ್ಥಾಪಕ ರಾಜೇಶ್ ಬಿ. ಎಸ್ ವಂದಿಸಿದರು. ಸುಳ್ಯ ಶಾಖೆಯ ಹಿರಿಯ ಅಧಿಕಾರಿ ಸಂದೇಶ್ ಕುಮಾರ್ ಐ ಕಾರ್ಯಕ್ರಮ ನಿರೂಪಿಸಿದರು.