ಎಸ್.ಎಸ್.ಎಲ್.ಸಿ.ಡಿಸ್ಟಿಂಕ್ಷನ್ ವಿದ್ಯಾರ್ಥಿಗಳಿಗೆ ಅಭಿನಂದನೆ
ಆಲೆಟ್ಟಿ ದ.ಕ.ಜಿ.ಪಂ. ಸರಕಾರಿ ಪ್ರೌಢಶಾಲೆಗೆ ನಿರ್ಮಾಣಗೊಂಡಿರುವ ನೂತನ ಕೊಠಡಿಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ಜು.8 ರಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ
ಕಳೆದ ಸಾಲಿನ ಎಸ್.ಎಸ್.ಎಲ್.ಸಿ.
ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ವೀಣಾ ಆಲೆಟ್ಟಿ, ಆಲೆಟ್ಟಿ ಸೊಸೈಟಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಉಪಾಧ್ಯಕ್ಷ ಸುಧಾಕರ ಆಲೆಟ್ಟಿ,ಪಂ.ಸದಸ್ಯ ಶಿವಾನಂದ ರಂಗತ್ತಮಲೆ, ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ, ಗುತ್ತಿಗೆದಾರ ತೀರ್ಥಕುಮಾರ್ ಕುಂಚಡ್ಕ,ಎಸ್.ಡಿ.ಎಂ.ಸಿ.ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಅದ್ಯಾಪಕ ವೃಂದದವರು, ಅಕ್ಷರ ದಾಸೋಹ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.