ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ವತಿಯಿಂದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಶ್ರೀ ಕೆ. ಜೈರಾಜ್ ಬಿ. ರೈಯವರು ತಿಳಿಸಿದ್ದಾರೆ.
ಸಂಘದ ಸದಸ್ಯರ ಮಕ್ಕಳಿಗೆ ೨೦೨೩-೨೪ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. ೯೫ ಹಾಗೂ ಅದಕ್ಕಿಂತ ಹೆಚ್ಚು ಅಂಕ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. ೯೦ ಹಾಗೂ ಅದಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ೨೦೨೩-೨೪ನೇ ಸಾಲಿನಲ್ಲಿ ಪಿ.ಯು.ಸಿ ಉತ್ತೀರ್ಣರಾಗಿ, ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ AIMS/BMC /MMC, ಸರಕಾರಿ ದಂತ ವೈದ್ಯಕೀಯ ಕಾಲೇಜು ಬೆಂಗಳೂರು, IIT/ NITK, National Law School, IIM ನಂತಹ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ವೃತ್ತಿಪರ ಪದವಿ/ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಭಾ ಪುರಸ್ಕಾರದ ಅರ್ಜಿಗಳು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಎಲ್ಲಾ ಶಾಖೆಗಳಲ್ಲಿ ಮತ್ತು ಸಂಘದ ಅಧಿಕೃತ ವೆಬ್‌ಸೈಟ್ http://ramakrishnacredit.com/ ನಲ್ಲಿ ಲಭ್ಯವಿದ್ದು ಜುಲೈ ೧೫, ೨೦೨೪ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸದಸ್ಯರು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.