ಜು.9ರ ಮಂಗಳವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹಾಗೂ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕೆ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಮತ್ತು ವಿದ್ಯುತ್ ಮಾರ್ಗಕ್ಕೆ ತಾಗಿಕೊಂಡಿರುವ ಅಪಾಯಕಾರಿ ಸ್ಥಿಯಲ್ಲಿರುವ ಮರಗಳನ್ನು ತೆರವುಗೊಳಿಸಲು ಇರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ರೊ, ತೋಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವಾರ, ಉಬರಡ್ಕ, ಕಲ್ಲು ಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಮತ್ತು 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಾದ ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.