ಸುಳ್ಯ ಶಾಸಕರ ಕಛೇರಿಗೆ ಸಂಸದ ಬ್ರಿಜೇಶ್ ಚೌಟ ಭೇಟಿ

0

ಹೂಗುಚ್ಚ ನೀಡಿ ಸ್ವಾಗತಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಇಂದು ಸುಳ್ಯಕ್ಕೆ ಆಗಮಿಸಿದ್ದ ಮಂಗಳೂರು ಲೋಕಸಭಾ ಕ್ಷೆತ್ರದ ಸಂಸದ ಬ್ರಿಜೇಶ್ ಚೌಟ ರವರು ಸುಳ್ಯ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಶಾಸಕರ ಕಚೇರಿಗೆ ಭೇಟಿ ನೀಡಿದರು.


ಈ ವೇಳೆ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯರವರು ಸಂಸದರಿಗೆ ಹೂಗುಚ್ಛವನ್ನು ನೀಡಿ ಸ್ವಾಗತಿಸಿದರು.
ಬಳಿಕ ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿಯ ಅಧ್ಯಕ್ಷ ವೆಂಕಟೇಶ್ ವಳಲಂಬೆ ಹಾಗೂ ಇನ್ನಿತರ ನಾಯಕರುಗಳು ಭಾಗವಹಿಸಿದ್ದರು.