ಮಂಗಳೂರು ವಿಶ್ವವಿದ್ಯಾನಿಲಯದ ಅರೆಭಾಷೆ ಸಂಶೋಧನಾ ಕೇಂದ್ರದ ಸಲಹಾ ಸಮಿತಿ ರಚನೆ

0

ಮಂಗಳೂರು ವಿಶ್ವವಿದ್ಯಾನಿಲಯದ ಅರೆಭಾಷೆ ಸಂಶೋಧನಾ ಕೇಂದ್ರದ ಸಲಹಾ ಸಮಿತಿಯ ರಚನೆಯು ಜು.10 ರಂದು ನಡೆದಿದ್ದು, ಅಧ್ಯಕ್ಷರಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳು ಆಯ್ಕೆಯಾಗಿದ್ದಾರೆ.


ಸದಸ್ಯರುಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಸುಳ್ಯ ಗಾಂಧಿನಗರದ ಮಹಮ್ಮದ್ ಸವಾದ್, ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿ ಸದಸ್ಯ ಡಾ.ವೈ.ನಾರಾಯಣ, ಐಕಳ ಪಾಂಪೆ ಕಾಲೇಜು ಪ್ರಾಂಶುಪಾಲ ಹಾಗೂ ಅರೆಭಾಷೆ ಅಕಾಡೆಮಿಯ ಮಾಜಿ ಸದಸ್ಯ ಡಾ.ಪುರುಷೋತ್ತಮ ಕರಂಗಲ್ಲು, ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಡಾ.ಬಿ.ಕೆ.ಸರೋಜಿನಿ, ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಕನಕಮಜಲು ಗ್ರಾಮದ ಕಜೆಗದ್ದೆ ಲಕ್ಷ್ಮೀನಾರಾಯಣ, ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸುಮಿತ್ರ, ಮೂಡಬಿದ್ರೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ದಾಮೋದರ ನಾರಾಲು, ಸಾಹಿತಿ ಚೆಂಬು ಗ್ರಾಮದ ಬ ಶ್ರೀಮತಿ ಸ್ಮಿತಾ ಅಮೃತರಾಜ್ ಹಾಗೂ ವಿಶ್ವವಿದ್ಯಾನಿಲಯದ ಕುಲಸಚಿವರು ಆಯ್ಕೆಯಾಗಿದ್ದಾರೆ.


ಖಾಯಂ ಸದಸ್ಯರುಗಳಾಗಿ ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷರು, ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಹಾಗೂ ವಿಶ್ವವಿದ್ಯಾನಿಲಯದ ಅರೆಬಾಷೆ ಸಂಶೋಧನಾ ಕೇಂದ್ರದ ಸಂಯೋಜಕರು ಇರುತ್ತಾರೆ.