ಸರಕಾರಿ ಪ್ರಾಥಮಿಕ ಶಾಲೆಗಳಲ್ಲೂ ಕನ್ನಡ ಜೊತೆಗೆ ಆಂಗ್ಲ ಮಾಧ್ಯಮ ಶಿಕ್ಷಣ ಅನಿವಾರ್ಯ : ಕು ಭಾಗೀರಥಿ ಮುರುಳ್ಯ
ಪಂಜ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ (ದ್ವಿ ಭಾಷಾ ಮಾಧ್ಯಮ)ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿದ್ದು ಜು.11 ರಂದು ಶಾಸಕಿ ಕು.ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ “ಸರ್ಕಾರಿ ಶಾಲೆಗಳಲ್ಲೂ ವಿದ್ಯಾರ್ಥಿಗಳ ಶೈಕ್ಷಣಿಕ ಹೆಚ್ಚಿನ ಬೆಳವಣಿಗೆಗೆ ದೃಷ್ಟಿಯಿಂದ ಪ್ರಾಥಮಿಕ ಶಿಕ್ಷಣದಲ್ಲಿಯೇ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ಅನಿವಾರ್ಯವಾಗಿದೆ “ಎಂದು ಹೇಳಿದರು.
ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ ಸಭಾಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಮತಿ ಶೀತಲ್, ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾ,ಸಿ ಆರ್ ಪಿ ಜಯಂತ ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರ ನೇರಳ, ಮುಖ್ಯ ಶಿಕ್ಷಕಿ ಶ್ರೀಮತಿ ಲೀಲಾ ಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶ್ರೀಮತಿ ಲೀಲಾ ಕುಮಾರಿ ಸ್ವಾಗತಿಸಿದರು. ಸೋಮಶೇಖರ ನೇರಳ ವಂದಿಸಿದರು.