ಪೆರ್ನಾಜೆ : ಪೋಷಕರ ಸಭೆ ಮತ್ತು ಪ್ರತಿಭೋತ್ಸವ ಕಾರ್ಯಕ್ರಮ

0

ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜು.10 ರಂದು ಹೆತ್ತವರ/ಪೋಷಕರ ಸಭೆ ಮತ್ತು ಪ್ರತಿಭೋತ್ಸವ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯಾರಾದ ಮಂಟ್ಯಯ್ಯರವರು ಜ್ಯೋತಿ ಬೆಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಸುಜಾತರವರು ಮಕ್ಕಳ ಕಲಿಕೆಯ ಜೊತೆಯಲ್ಲಿ ಪಕ್ಷೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರ ಮೂಲಕ ಸರ್ವಾಂಗೀಣ ಪ್ರಗತಿಯನ್ನು ಸಾಧಿಸಬಹುದೆಂದು ಶುಭ ಹಾರೈಸಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಶ್ರೀಮತಿ ಶಾರದರವರು ಸಭೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಪ್ರತಿಭೋತ್ಸವದ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಪ್ರೌಢಶಾಲಾ ಹಾಗೂ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಪ್ರತಿಭೆಯನ್ನು ವೇದಿಕೆಯಲ್ಲಿ ಅನಾವರಣಗೊಳಿಸಿದರು. ನಿವೃತ್ತ ಕನ್ನಡ ಉಪನ್ಯಾಸಕಿ ಶ್ರೀಮತಿ ಸುಕನ್ಯ ದೇಲಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಅಧ್ಯಾಪಕರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.