ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸುಳ್ಯ ತಾಲೂಕು ಆಶ್ರಯದಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮವು ಕುಕ್ಕುಜಡ್ಕದ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಜು.10ರಂದು ನಡೆಯಿತು.
ಕಾರ್ಯಕ್ರಮವನ್ನು ಚೊಕ್ಕಾಡಿ ಪ್ರೌಢಶಾಲಾ ಸಂಚಾಲಕ ರಾಧಾಕೃಷ್ಣ ಬೊಳ್ಳೂರು ಅವರು ಗಿಡ ನೆಡುವ ಮೂಲಕ ಉದ್ಘಾಟಸಿ, ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ ಮೂಕಮಲೆ, ಅಮರಪಡ್ನೂರು ಒಕ್ಕೂಟ ಅಧ್ಯಕ್ಷೆ ಶ್ರೀಮತಿ ವೀಣಾ ಶಾಲಾಭಿವೃದ್ಧಿ ಸಮಿತಿ ಕಾರ್ಯದರ್ಶಿ ತೇಜಸ್ ಕಡಪಾಳ ಉಪಸ್ಥಿತರಿದ್ದರು.
ದೊಡ್ಡತೋಟ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಸುಳ್ಯ ತಾಲೂಕು ಕೃಷಿ ಮೇಲ್ವಿಚಾರಕ ರಮೇಶ್ ಅವರು ಯೋಜನೆಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯ ಸಂಕೀರ್ಣ ಚೊಕ್ಕಾಡಿ ಅವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಜಾಲ್ಸೂರು ವಲಯ ಮೇಲ್ವಿಚಾರಕ ತೀರ್ಥರಾಮ ವಂದಿಸಿದರು. ಪೈಲಾರ್ ಸೇವಾಪ್ರತಿನಿಧಿ ಚಂದ್ರಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.
ಸಭೆಯಲ್ಲಿ ಸೇವಾಪ್ರತಿನಿಧಿಗಳಾದ ಶ್ರೀಮತಿ ಪವಿತ್ರ ಮತ್ತು ಶ್ರೀಮತಿ ದಿವ್ಯ ಉಪಸ್ಥಿತರಿದ್ದರು.
ಸದ್ರಿ ಶಾಲೆಯ ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸ್ಪರ್ಧೆ ಏರ್ಪಡಿಸಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.