ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಾಮ ಸಭೆ : ಕಾವೇರಿದ ಚರ್ಚೆ

0

ಬೆಳ್ಳಾರೆ ಗ್ರಾಮ ಪಂಚಾಯತ್ 2024-25 ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಮಿತ ಎಲ್ ರೈಯವರ ಅಧ್ಯಕ್ಷತೆಯಲ್ಲಿ ಜು.12 ರಂದು ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.


ಪಿಡಿಒ ಪ್ರವೀಣ್ ರವರು ಸ್ವಾಗತಿಸಿ,ವರದಿ ಮಂಡಿಸಿದರು.


ಸುಳ್ಯ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ರುಕ್ಕು ರವರು ನೋಡೆಲ್ ಅಧಿಕಾರಿಯಾಗಿದ್ದರು.


ಚಾವಡಿಬಾಗಿಲು ನವಗ್ರಾಮ ರಸ್ತೆ ಕಾಂಕ್ರೀಟೀಕರಣ, ಬೆಳ್ಳಾರೆ ಪೇಟೆಯಲ್ಲಿ ತ್ಯಾಜ್ಯ ಸಂಗ್ರಹಣಾ ಶುಲ್ಕ ಸಂಗ್ರಹ, ಸ್ಮಶಾನ ಅಭಿವೃದ್ಧಿ ಬಗ್ಗೆ ಗಂಭೀರ ಚರ್ಚೆಗಳು ನಡೆಯಿತು.


ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ವೀಣಾ ಮೂಡಾಯಿತೋಟ ,ಸದಸ್ಯರು ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು ಮಾಹಿತಿ ನೀಡಿದರು.