ಶಾಂತಿನಗರ ದೀಪಾಂಜಲಿ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆಯು ಜು. 7ರಂದು ಶಾಂತಿನಗರ ಶಾಲಾ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಲಲಿತಾ.ಯಂ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಅಧ್ಯಕ್ಷರು ಕಾರ್ಯಕ್ರಮಕ್ಕೆ ಸ್ವಾಗತಿಸಿ ಒಂದು ವರುಷದ ವಾರ್ಷಿಕ ವರದಿಯನ್ನು ಮಂಡಿಸಿದರು. ಶ್ರೀಮತಿ ದೇವಕಿ ಬಿಯವರು ಒಂದು ವರ್ಷದ ಲೆಕ್ಕ ಪತ್ರ ಮಂಡಿಸಿದರು. ವೇದಿಕೆಯಲ್ಲಿ ಮಹಿಳಾ ಮಂಡಲದ ಸ್ಥಾಪಕಾಧ್ಯಕ್ಷ ಶ್ರೀಮತಿ ಹರ್ಷಕರುಣಾಕರ ಸೇರ್ಕಜೆ ಉಪಸ್ಥಿತರಿದ್ದು ಶುಭ ಹಾರೈಸಿದರು ಹಾಗೂ ಮುಂದಿನ ಒಂದು ವರ್ಷದ ಅವಧಿಗೆ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಪುನರಾಯ್ಕೆ ಮಾಡಲಾಯಿತು.
ವೇದಿಕೆಯಲ್ಲಿ ನಿವೃತ್ತ ಆರೋಗ್ಯ ಸಹಾಯಕ ಅಧಿಕಾರಿ ಶ್ರೀಮತಿ ದೇವಕಿ ಬಿ. ಸೋಣಂಗೇರಿ ಉಪಸ್ಥಿತರಿದ್ದು ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಭಜನಾ ಮಂಡಳಿ ಸದಸ್ಯೆ ಶ್ರೀಮತಿ ಹೇಮಲತಾ ದೇಂಗೋಡಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಶ್ರೀಮತಿ ಶೋಭಾ ಗೋಪಾಲ್ ವಂದಿಸಿದರು.