ಬೆಳ್ಳಾರೆ ಕೆಪಿಎಸ್ ವಿದ್ಯಾರ್ಥಿನಿ ಕು. ಭವಿತಾರಿಗೆ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

0

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಕೆ.ಪಿ.ಎಸ್ ಬೆಳ್ಳಾರೆ ಪ. ಪ.ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಭವಿತಾರವರು ಭಾಗವಹಿಸಿ, ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಬಹುಮಾನ ಮತ್ತು ಪ್ರಮಾಣಪತ್ರವನ್ನು ಸಂಸ್ಥೆಯ ಪ್ರಾಚಾರ್ಯರಾದ ಜನಾರ್ದನ ಕೆ.ಎನ್ ರವರು ವಿಜೇತ ವಿದ್ಯಾರ್ಥಿನಿಗೆ ಹಸ್ತಾಂತರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ ಉಪನ್ಯಾಸಕಿಯರಾದ ಶ್ರೀಮತಿ ಅನುಪಮಾ ಹಾಗೂ ಪರಿಮಳ ರಾವ್ ಹಾಜರಿದ್ದರು.