ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಶೈಕ್ಷಣಿಕ ಸಹಮಿಲನ

0

ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ವಿಭಾಗದ ಜಿಲ್ಲಾ ಶೈಕ್ಷಣಿಕ ಸಹಮಿಲನವು ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಜು.13ರಂದು ಜರುಗಿತು.

ಕಾರ್ಯಕ್ರಮವನ್ನು ಕೆ.ವಿ. ಜಿ. ಆರ್ಯವೇದಿಕ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಡಿ.ವಿ. ಲೀಲಾಧರ್ ಅವರು ಉದ್ಘಾಟಿಸಿ ಮಾತನಾಡಿ ಇಂತಹ ಗ್ರಾಮೀಣ ಭಾಗದಲ್ಲಿ ಸಂಸ್ಕಾರಯುತ ಶಿಕ್ಷಣ ನೀಡುವಂತಹ ಸಂಸ್ಥೆಗಳು ಹೆಚ್ಚು ಹೇಚ್ಚು ಅಭಿವೃದ್ದಿ ಹೊಂದಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಪ್ರಜ್ಞೆ ಬೆಳೆಸಿ ಸಮಾಜಕ್ಕೆ ಉತ್ತಮ ಪ್ರಜೆಗಳನ್ನಾಗಿಸುವಲ್ಲಿ ಯಶಸ್ಸನ್ನು ಕಾಣಲೆಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಪ್ರಧಾನ ಅಭಾಗ್ಯತರಾಗಿ ಚೊಕ್ಕಾಡಿ ಸತ್ಯಸಾಯಿ ವಿದ್ಯಾಕೇಂದ್ರದ ಸಂಚಾಲಕ ತೇಜ್ ಪ್ರಕಾಶ್ ಬುಡ್ಲೆಗುತ್ತು ಕಾರ್ಯಕ್ರಮಕ್ಕೆ ಶುಭಹಾರೈಸಿದರು

ಕರ್ನಾಟಕ ಪ್ರಾಂತ ನೈತಿಕ ಆಧ್ಯಾತ್ಮಿಕ ಶಿಕ್ಷಣ ಪ್ರಮುಖರಾದ ಶ್ರೀಪತಿ ಗೌರವ ಉಪಸ್ಥಿತರಿದ್ದರು.
ವಿದ್ಯಾಭಾರತಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಲೋಕಯ್ಯ ಡಿ. ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ವಿದ್ಯಾಭಾರತಿ ಸಂಲಗ್ನಗೊಂಡ ಪ್ರೌಢ ವಿಭಾಗದ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಶ್ರೇಣಿ ಪಡೆದ ಹಾಗೂ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯ ನಿಕಟ ಪೂರ್ವ ಸಂಚಾಲಕರು ಹಾಗೂ ಪ್ರಸ್ತುತ ಕೋಶಾಧಿಕಾರಿಯಾದ ಸುಧಾಕರ ಕಾಮತ್, ಸದಸ್ಯರುಗಳಾದ ಪುರುಷೋತ್ತಮ ಕಿರ್ಲಾಯ, ಶ್ರೀಮತಿ ಲತಾ ಮಧುಸೂದನ್, ಶಿವಪ್ರಸಾದ್ ಉಗ್ರಾಣಿಮನೆ, ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಹೇಮಂತ್ ಮಠ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯರಾದ ಜಯಪ್ರಸಾದ್ ಕಾರಿಂಜ, ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ ಎನ್. ಗೋಪಾಲ್ ರಾವ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾಭಾರತಿಗೆ ಸಂಲಗ್ನಗೊಂಡ ವಿವಿಧ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರುಗಳು ಹಾಗೂ ಸರ್ವ ಸದಸ್ಯರುಗಳು, ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರು ಉಪನ್ಯಾಸಕ ವೃಂದದವರು, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರು ಮತ್ತು ಸಹ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ನ. ಸೀತಾರಾಮ ಅವರು ಸ್ವಾಗತಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್ ವಂದಿಸಿದರು. ಸಹ ಶಿಕ್ಷಕ ಶಶಿಧರ್ ಎಂ ಮತ್ತು ಶ್ರೀಮತಿ ದಿವ್ಯ ಕಾರ್ಯಕ್ರಮ ನಿರೂಪಿಸಿದರು.