ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ಬಳಿ ಮುಖ್ಯರಸ್ತೆಗೆ ಅಡ್ಡಲಾಗಿ ಬಿದ್ದ ಮರ

0

33 ಕೆವಿ ಲೈನ್ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತ

ರಸ್ತೆ ಬದಿಯಲ್ಲಿದ್ದ ಬೃಹದಾಕಾರದ ಮರವೊಂದು ಮುಖ್ಯರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮವಾಗಿ 33 ಕೆ.ವಿ. ವಿದ್ಯುತ್ ಲೈನ್ ಗೆ ಹಾನಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಘಟನೆ ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲಾ ಬಳಿ ಜು.14ರಂದು ಬೆಳಿಗ್ಗೆ ಸಂಭವಿಸಿದೆ.

ಮರ 33 ಕೆ.ವಿ. ವಿದ್ಯುತ್ ಲೈನ್ ಮೇಲೆ ಬಿದ್ದ ಪರಿಣಾಮವಾಗಿ ವಿದ್ಯುತ್ ಲೈನ್ ಮತ್ತು ಕಂಬಗಳಿಗೆ ಹಾನಿಯಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯವರು ಬಂದು ಮರ ತೆರವುಗೊಳಿಸಿದ್ದು, ಮೆಸ್ಕಾಂ ಸಿಬ್ಬಂದಿಗಳು ಬಂದು ದುರಸ್ತಿ ಕಾರ್ಯದಲ್ಲಿ ತೊಡಗಿರುವುದಾಗಿ ತಿಳಿದುಬಂದಿದೆ.

ಘಟನೆಯಿಂದ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಇದೀಗ ಮರ ತೆರವುಗೊಳಿಸಿರುವುದಾಗಿ ತಿಳಿದುಬಂದಿದೆ.