10ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಎಸ್ ಜಿ ಎಸ್ ಇಂಟರ್ನ್ಯಾಷನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ರಿಸರ್ಚ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರ ಕರ್ನಾಟಕ ಸರ್ಕಾರ ಇವರ ಸಹಕಾರದಲ್ಲಿ 14 ಜುಲೈ 2024 ರಂದು ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣ ಕ್ರೀಡಾಂಗಣ ನಡೆದ ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕ್ಷಮಾ ಇವರು ಟ್ರೆಡಿಶನಲ್ ಯೋಗ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಏಷ್ಯನ್ ಗೇಮ್ಸ್ ಗೆ ಅರ್ಹತೆ ಪಡೆದಿರುತ್ತಾರೆ.