ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗೆ ಪ್ರಥಮ ಸ್ಥಾನ
ಹತ್ತನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಎಸ್.ಜಿ.ಎಸ್. ಇಂಟರ್ ನ್ಯಾಶನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ರಿಸರ್ಚ್ ಸೆಂಟರ್ ಜಂಟಿ ಆಶ್ರಯದಲ್ಲಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರ ಕರ್ನಾಟಕ ಸರ್ಕಾರದ ಸಹಕಾರದಲ್ಲಿ ಬೆಂಗಳೂರಿನಲ್ಲಿ ಜು.14ರಂದು ನಡೆದ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ದೆಯಲ್ಲಿ ವಿದ್ಯಾಸಂಸ್ಥೆಯ ಮೂರನೇ ತರಗತಿ ವಿದ್ಯಾರ್ಥಿ ವಿಧಾತ್ ಗೌಡ ಎಂ.ಟಿ. ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಈ ವಿದ್ಯಾರ್ಥಿಯ ಸಹೋದರಿ ವಿದ್ಯಾ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಕ್ಷಮಾ ಎಂ. ಟಿ. ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿರುತ್ತಾರೆ.
ಈ ವಿಧ್ಯಾರ್ಥಿಗಳು ಅಜ್ಜಾವರ ಗ್ರಾಮದ ಮುಡೂರು ಮನೆಯ ತೀರ್ಥರಾಮ ಮತ್ತು ಶ್ರೀಮತಿ ಪೂರ್ಣಿಮಾ ಎ.ಜೆ ದಂಪತಿಯ ಮಕ್ಕಳಾಗಿದ್ದು, ಇವರಿಗೆ ಯೇಗ ಶಿಕ್ಷಕರಾದ ಸಂತೋಷ್ ಮತ್ತು ವಾಣಿ ಎ. ಅವರು ಯೋಗ ತರಬೇತಿ ನೀಡಿದ್ದಾರೆ.