ಲಯನ್ಸ್ ಕ್ಲಬ್ ಪಂಜ, ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದೊಂದಿಗೆ ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ ಹಾಗೂ ಅಂಚೆ ಜನಸಂಪರ್ಕ ಅಭಿಯಾನ ಜು.18 ರಂದು ಪೂ.ಗಂಟೆ 9 ರಿಂದ ಪಂಜ ಲಯನ್ಸ್ ಕ್ಲಬ್ ಸಭಾಭವನದಲ್ಲಿ ಜರುಗಲಿದೆ.
ಆಧಾರ್ ತಿದ್ದುಪಡಿ ಮತ್ತು ನೋಂದಣಿಗೆ ಬೇಕಾಗುವ ಎಲ್ಲಾ ದಾಖಲೆಗಳನ್ನು ಕಡ್ಡಾಯವಾಗಿ ತರ ಬೇಕು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.