ಯೋಗಾಸನದಲ್ಲಿ 3ನೇ ವಿಶ್ವ ದಾಖಲೆ ಮಾಡಿದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ

0

ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ , 01 ನಿಮಿಷದಲ್ಲಿ 29 ಬಾರಿ ಉಪವಿಷ್ಠ ಕೋನಾಸನದಿಂದ ರಾಮದೂತಾನಸನಕ್ಕೆ ಪರಿವರ್ತಿಸುವ ಮೂಲಕ ಅಂತಾರಾಷ್ಟ್ರೀಯ ಯೋಗ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.

ಇವರು ವಾಲ್ತಾಜೆ ಪ್ರಶಾಂತ್ ವಾಲ್ತಾಜೆ ಮತ್ತು ಶ್ರೀಮತಿ ಚೈತ್ರ ರವರ ಪುತ್ರಿ. ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರದ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ಅವರಿಂದ ಯೋಗ ತರಬೇತಿ ಪಡೆಯುತ್ತಿದ್ದಾರೆ. ಪ್ರಸ್ತುತ ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ನ 5ನೇ ತರಗತಿ ವಿದ್ಯಾರ್ಥಿನಿ.