ಕೊಡಗು ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ಮರ ಬಿದ್ದು ರಸ್ತೆ ಸಂಚಾರ ಸ್ಥಗಿತ

0

ನಿರಂತರವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ಅಲ್ಲಲ್ಲಿ ಹಾನಿ ನಡೆಯುತ್ತಿದ್ದು, ಜು.17ರಂದು ಬೆಳಿಗ್ಗೆ ಕೊಡಗು ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡಿರುವುದಾಗಿ ತಿಳಿದುಬಂದಿದೆ.

ಮಾಣಿ – ಮೈಸೂರು ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಗಮಿಸಿದ್ದು, ಮರ ತೆರವು ಕಾರ್ಯ ನಡೆಯುತ್ತಿರುವುದಾಗಿ ತಿಳಿದುಬಂದಿದೆ.