ಮದೆನಾಡಿನ ಕರ್ತೋಜಿ ಬಳಿ ರಸ್ತೆಯಲ್ಲಿ ಬಿರುಕು -ಗುಡ್ಡ ಕುಸಿಯುವ ಆತಂಕ

0

ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ಸಂಚಾರಕ್ಕೆ ಮಡಿಕೇರಿ ರಸ್ತೆ ಬಂದ್

ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡಿನ ಕರ್ತೋಜಿ ಬಳಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸಮೀಪದ ಗುಡ್ಡದಿಂದ ಮಣ್ಣು ರಸ್ತೆಗೆ ಕುಸಿಯುವ ಭೀತಿ ಎದುರಾಗಿರುವುದರಿಂದ ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ್ ಅವರು ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದು, ಜು.18ರಿಂದ ಜು.22ರವರೆಗೆ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಯಾವುದೇ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ಗೇಟನ್ನು ರಾತ್ರಿ 8ರಿಂದ ಬೆಳಿಗ್ಗೆ 6ರವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದು, ಮಡಿಕೇರಿಯ ಟೋಲ್ ಗೇಟ್ ನಲ್ಲಿಯೂ ಬ್ಯಾರಿಕೇಡ್ ಇಟ್ಟು ರಾತ್ರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.