ಸುಳ್ಯದ ಶ್ರೀ ಶಾರದಾಂಬ ಸಮೂಹ ಸಮಿತಿ, ಶ್ರೀ ಭಗವತಿ ಯುವ ಸೇವಾ ಸಂಘ, ಬಂಟರ ಯಾನೆ ನಾಡವರ ಸಂಘ, ರೋಟರಿ ಕ್ಲಬ್ , ರೋಟರಿ ಕ್ಲಬ್ ಸಿಟಿ ಹಾಗೂ ಯುವಜನ ಸಂಯುಕ್ತ ಮಂಡಳಿ ಸಂಯುಕ್ತಾಶ್ರಯದಲ್ಲಿ ಕೆಸರುಗದ್ದೆ ದಸರಾ ಕ್ರೀಡಾಕೂಟ -2024 ಕಾರ್ಯಕ್ರಮವು ಸುಳ್ಯದ ಕೇರ್ಪಳ ಶ್ರೀ ಭಗವತಿ ಕ್ಷೇತ್ರದ ಮುಂಭಾಗದ ಗದ್ದೆಯಲ್ಲಿ ಜು.28ರಂದು ನಡೆಯಲಿದೆ.
ಕಾರ್ಯಕ್ರಮವನ್ನು ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೃಪಾಶಂಕರ ತುದಿಯಡ್ಕ ಅವರು ಉದ್ಘಾಟಿಸಲಿದ್ದಾರೆ. ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕಿ ಭಾಗೀರಥಿ ಮುರುಳ್ಯ, ಶ್ರೀ ಶಾರದಾಂಬ ಉತ್ಸವ ಸಮಿತಿ ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಉತ್ಸವ ಸಮಿತಿ ಅಧ್ಯಕ್ಷ ಡಾ. ಲೀಲಾಧರ್ ಡಿ.ವಿ., ಶ್ರೀ ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್., ದಸರಾ ಉತ್ಸವ ಸಮಿತಿ ಖಜಾಂಜಿ ಹಾಗೂ ಬೂಡು ಶ್ರೀ ಭಗವತಿ ಯುವ ಸೇವಾ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಕೇರ್ಪಳ, ಸುಳ್ಯದ ಬಂಟರಯಾನೆ ನಾಡವರ ಸಂಘದ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ರಾಧಾಕೃಷ್ಣ ರೈ, ರೋಟರಿ ಕ್ಲಬ್ ಅಧ್ಯಕ್ಷೆ ಅಧ್ಯಕ್ಷೆ ಶ್ರೀಮತಿ ಯೋಗಿತ ಗೋಪಿನಾಥ್, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪ್ರವೀಣ್ ಕುಮಾರ್, ರೋಟರಿ ಕ್ಲಬ್ ಸಿಟಿ ಅಧ್ಯಕ್ಷ ಶಿವಪ್ರಸಾದ್ ಕೆ.ವಿ. ಉಪಸ್ಥಿತರಿರಲಿದ್ದಾರೆ.
ಕೆಸರುಗದ್ದೆ ಕ್ರೀಡಾಕೂಟದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ಹಗ್ಗ ಜಗ್ಗಾಟ ಸ್ಪರ್ಧೆ, ಎತ್ತಿನ ಬಂಡಿ ಓಟ, ರಿಲೆ ಓಟ, ಹಿಮ್ಮುಖ ಓಟ, ನಿಧಿ ಶೋಧನೆ ಸ್ಪರ್ಧೆ ಜರುಗಲಿದೆ.
ಪ್ರೌಢಶಾಲಾ ಬಾಲಕ ಬಾಲಕಿಯರಿಗೆ ನೂರು ಮೀ. ರಿಲೇ ಓಟ, ಸೇರಿದಂತೆ ವ್ಯಯಕ್ತಿಕ ಸ್ಪರ್ಧೆಗಳು ನಡೆಯಲಿದೆ.