ಕಲ್ಲುಗುಂಡಿ: ಪಾದಾಚಾರಿಗೆ ಬೈಕ್ ಢಿಕ್ಕಿ – ಗಾಯ

0

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು ಗಾಯಗೊಂಡ ಘಟನೆ ದ‌.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೇಟೆಯಲ್ಲಿ ಜು.22ರಂದು ರಾತ್ರಿ ಸಂಭವಿಸಿದೆ.

ಕಲ್ಲುಗುಂಡಿಯ ಬಾಚಿಗದ್ದೆ ನಿವಾಸಿ ಸಂಜೀವ ಪೂಜಾರಿ ಎಂಬವರು ರಸ್ತೆಯ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಬೈಕ್ ಢಿಕ್ಕಿ ಹೊಡೆದಿದ್ದು, ರಸ್ತೆಯ ಎಸೆಯಲ್ಪಟ್ಟ ಸಂಜೀವ ಪೂಜಾರಿ ಅವರ ತಲೆಗೆ ಗಾಯವಾಗಿದ್ದು, ಸ್ಥಳೀಯರು ಸೇರಿ ಅವರನ್ನು ಸಂಪಾಜೆ ಆಸ್ಪತ್ರೆಗೆ ಕರೆದೊಯ್ದಿರುವುದಾಗಿ ತಿಳಿದುಬಂದಿದೆ.