ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್ ಸುಬ್ರಹ್ಮಣ್ಯ ಠಾಣೆ ಭೇಟಿ

0

ಸುಬ್ರಹ್ಮಣ್ಯ ಠಾಣೆಗೆ ಜು.23 ರಂದು ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್ ಭೇಟಿ ನೀಡಿದರು.

ಠಾಣೆಯ ವತಿಯಿಂದ ಗೌರವ ವಂದನೆ ಸಲ್ಲಿಸಲಾಯಿತು. ಈ ಸಂದರ್ಭ ಠಾಣಾ ಸ್ವಚ್ಚತೆ, ಠಾಣಾ ಕಡತಗಳ ನಿರ್ವಹಣೆಯ ಬಗ್ಗೆ ಪರಿಶೀಲಿಸಿ, ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಠಾಣಾ ಕರ್ತವ್ಯಗಳ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಿದರು. ಬಳಿಕ ಠಾಣೆಯ ನೂತನ ಕಟ್ಟಡದ ಕಾಮಗಾರಿ ಪರಿಶೀಲಿಸಿದರು.