ಸುಳ್ಯದ ಬಿಜೆಪಿ ಮುಖಂಡರಿಂದ ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ ಭೇಟಿ

0

ಸುಳ್ಯದ ಬಿಜೆಪಿ ಮುಖಂಡರ ನಿಯೋಗ ಇಂದು ( ಜು.25 ರಂದು) ವಿಧಾನಸೌಧ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಭೇಟಿ ಮಾಡಿ ಸಮಾಲೋಚಿಸಿದರು.

ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ ಸಾಥ್ ನೀಡಿದ್ದು, ನಿಯೋಗದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್ ಮನ್ಮಥ, ರಾಜ್ಯ ಮೀನುಗಾರಿಕೆ ನಿಗಮದ ಮಾಜಿ ಅಧ್ಯಕ್ಷ ಎ.ವಿ ತೀರ್ಥರಾಮ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವೆಂಕಟ್ ದoಬೆಕೋಡಿ, ಎಪಿಎಂಸಿ ಮಾಜಿ ಅಧ್ಯಕ್ಷ ವಿನಯ್ ಮುಳುಗಾಡು, ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಕುಶಾಲಪ್ಪ ಪೆರುವಾಜೆ ಮೊದಲಾದವರಿದ್ದರು.