ಲಯನ್ಸ್ ಕ್ಲಬ್ ಪಂಜ , ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು,ಪುತ್ತೂರು ಮತ್ತು ಸುಳ್ಯ ,
ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಉಡುಪಿ, ಮಂಗಳೂರು ಮತ್ತು ಸುಳ್ಯ, ಡಾ. ಬಿ ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಸೆಂಚುರಿ ಗ್ರೂಪ್ಸ್ ಬೆಂಗಳೂರು, ರೋಟರಿ ಕ್ಲಬ್ ಕಣ್ಣಿನ ಆಸ್ಪತ್ರೆ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ 18ನೇ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸೆ ಶಿಬಿರ ಜು.28 ರಂದು ಪೂರ್ವಾಹ್ನ ಗಂಟೆ 9.30 ರಿಂದ ಪಂಜ ಲಯನ್ಸ್ ಭವನದಲ್ಲಿ ಜರುಗಲಿದೆ.