ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ತರಬೇತಿ

0

ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ದಲ್ಲಿ ರೀಡರ್ಸ್ ಕ್ಲಬ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ತರಬೇತಿಯನ್ನು ಕಾಲೇಜಿನಲ್ಲಿ ಪ್ರಾರಂಭಿಸಲಾಯಿತು.

ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಸುಳ್ಯದ ವಿದ್ಯಾಮಾತ ಅಕಾಡೆಮಿಯ ಸಂಸ್ಥಾಪಕರಾದ ಭಾಗ್ಯೇಶ್ ರೈ. ರವರು ನೆರವೇರಿಸಿದರು. ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಯ ಅಗತ್ಯತೆ ಮತ್ತು ವಿದ್ಯಾರ್ಥಿಗಳಿಗೆ ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಡಾ. ರೇವತಿ ನಂದನ್ ರವರು ವಹಿಸಿ ತರಬೇತಿ ತರಗತಿಯ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಸಿಗುವಂತಾಗಲಿ ಎಂದು ಶುಭ ಹಾರೈಸಿದರು.

ರೀಡರ್ಸ್ ಕ್ಲಬ್ ನ ಸಂಚಾಲಕರಾದ ಉಪನ್ಯಾಸಕಿ ಶ್ರೀಮತಿ ಸ್ವರ್ಣ ಕಲಾ ಎ ಎಸ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ .ಕೆ ರವರು ಶುಭ ಹಾರೈಸಿದರು ಉಪನ್ಯಾಸಕರಾದ ಬಾಲಕೃಷ್ಣ ಕೆ ರವರು ಅತಿಥಿಗಳನ್ನು ಪರಿಚಯಿಸಿದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ದೀಕ್ಷಿತ ಅತಿಥಿಗಳನ್ನು ಸ್ವಾಗತಿಸಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಹಿತಾಶ್ರೀ ವಂದಿಸಿದರು ಪ್ರಥಮ ವಿಜ್ಞಾನ ವಿಭಾಗದ ಶ್ರೀವಲ್ಲಿ ಕಾರ್ಯಕ್ರಮವನ್ನು ನಿರೂಪಿಸಿದರು. ಸಂಸ್ಥೆಯ ಉಪನ್ಯಾಸಕರುಗಳು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.