ಕೊಯನಾಡು: ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಸ್ಥಳ ವೀಕ್ಷಿಸಿದ ಅಧಿಕಾರಿಗಳು

0

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಹಿಂಭಾಗ ಭಾರೀ ಪ್ರಮಾಣದಲ್ಲಿ ಬರೆ ಕುಸಿದು ಮಕ್ಕಳ ಶಿಕ್ಷಣಕ್ಕೆ ಯೋಗ್ಯವಾಗದ ಹಿನ್ನೆಲೆಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಅವರ ನಿರ್ದೇಶನದಂತೆ ಅಧಿಕಾರಿಗಳ ತಂಡ ಜು.26ರಂದು ಕೊಯನಾಡಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿರುವುದಾಗಿ ತಿಳಿದುಬಂದಿದೆ.
ಕೊಡಗು ಜಿಲ್ಲಾ ನೋಡೆಲ್ ಅಧಿಕಾರಿ ಹೇಮಂತ್ ಕುಮಾರ್, ಸಹಾಯಕ ಇಂಜಿನಿಯರ್ ಅಶೋಕ್, ಸಂಪಾಜೆ ಕಂದಾಯ ಅಧಿಕಾರಿ ವೆಂಕಟೇಶ್ ಉಪಸ್ಥಿತರಿದ್ದು, ಸ್ಥಳ ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹನೀಫ್ ಎಸ್. ಪಿ., ಸಾಮಾಜಿಕ ಹೋರಾಟಗಾರ ಟಿ. ಸಿ. ಅಪ್ಪಣ್ಣ, ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಕುಂದಲ್ಪಾಡಿ, ಸದಸ್ಯರುಗಳಾದ ಪುರುಷೋತ್ತಮ ಕಾಡುಮನೆ, ಉಮೇಶ್, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.