25ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ಸೈಂಟ್ ಜೋಸೆಫ್ ಶಾಲೆಯಲ್ಲಿ ಜು.26ರಂದು ಆಚರಿಸಲಾಯಿತು.
ವಿದ್ಯಾಸಂಸ್ಥೆಯ ಸಂಚಾಲಕರಾದ ರೆ|ಫಾ| ವಿಕ್ಟರ್ ಡಿ’ಸೋಜ ರವರು ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ತಮ್ಮ ಜೀವ ಬಲಿದಾನ ಮಾಡಿದ ವೀರಯೋಧರ ಮತ್ತು ಈಗಲೂ ನಮ್ಮ ದೇಶದ ರಕ್ಷಣೆ ಮಾಡುವ ಸೈನಿಕರ ಗುಣಗಾನ ಮಾಡಿದರಲ್ಲದೆ ಅವರಿಗಾಗಿ ದೇವರಲ್ಲಿ ಪ್ರಾರ್ಥಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ನಿಯೋಜಿತ ಮುಖ್ಯ ಶಿಕ್ಷಕಿ ಸಿಸ್ಟರ್ ಮೇರಿ ಸ್ಟೆಲ್ಲಾ, ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ರೀಟಲತಾ ಡಿ ಸಿಲ್ವಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರಯೋಧರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಲಾಯಿತು. ಶಿಕ್ಷಕಿ ಜ್ಯೋತಿ ಜೆ. ರೈಯವರು ಕಾರ್ಗಿಲ್ ಯುದ್ಧದ ಬಗ್ಗೆ ಸವಿವರವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ನಂತರ ಶಿಕ್ಷಕಿ ಹೇಮಾವತಿಯವರು ದೇಶಭಕ್ತಿ ಗೀತೆಯನ್ನು ಹಾಡಿ ಹುತಾತ್ಮರಾದ ಸೈನಿಕರಿಗೆ ಗೀತನಮನವನ್ನು ಸಲ್ಲಿಸಿದರು.
ವಿದ್ಯಾರ್ಥಿನಿ ಡೆನಿಕಾ ಲೋಬೋ 10ನೇ ತರಗತಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಅನಿತಾ ಮಸ್ಕರೇನಸ್, ಶಿಕ್ಷಕರು ಹಾಗೂ ಶಿಕ್ಷಕೇತರರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.