ಸುಳ್ಯ: ಶ್ರೀ ಶಾರದಾಂಬ ಸಮೂಹ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೆಸರುಗದ್ದೆ ದಸರಾ ಕ್ರೀಡೋತ್ಸವ -2024 – ಉದ್ಘಾಟನೆ

0

ಸುಳ್ಯದ ಶ್ರೀ ಶಾರದಾಂಬ ಸಮೂಹ ಸಮಿತಿ, ಶ್ರೀ ಭಗವತಿ ಯುವಸೇವಾ ಸಂಘ ಸುಳ್ಯ, ಬಂಟರ ಯಾನೆ ನಾಡವರ ಸಂಘ ಸುಳ್ಯ , ಲಯನ್ಸ್ ಕ್ಲಬ್ ಸುಳ್ಯ, ರೋಟರಿ ಕ್ಲಬ್ ಸುಳ್ಯ, ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ಸಂಯುಕ್ತ ಆಶ್ರಯದಲ್ಲಿ ಕೆಸರುಗದ್ದೆ ದಸರಾ ಕ್ರೀಡೋತ್ಸವ – 2024 ಸುಳ್ಯದ ಪನ್ನೆಬೀಡು ಶ್ರೀ ಭಗವತಿ ಕ್ಷೇತ್ರದ ಮುಂಭಾಗದ ಗದ್ದೆಯಲ್ಲಿ ಜು.28ರಂದು ಬೆಳಿಗ್ಗೆ ಉದ್ಘಾಟನೆಗೊಂಡಿತು.

ಗದ್ದೆಯ ಮಾಲಕರಾದ ಕೃಪಾಶಂಕರ ತುದಿಯಡ್ಕ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು.
ಗದ್ದೆಯ ಮಾಲಕರಾದ ಬೂಡು ರಾಧಾಕೃಷ್ಣ ರೈ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ತೆಂಗಿನಕಾಯಿ ಒಡೆಯುವುದರ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು.

ಶ್ರೀ ಶಾರದಾಂಬ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ ಅವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ, ಶ್ರೀ ಶಾರದಾಂಬ ಉತ್ಸವ ಸಮಿತಿ ಗೌರವಾಧ್ಯಕ್ಷ ಕೃಷ್ಣಕಾಮತ್ ಅರಂಬೂರು , ಶ್ರೀ ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್., ಶ್ರೀ ಭಗವತಿ ಯುವ ಸೇವಾ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಕೇರ್ಪಳ, ಸುಳ್ಯದ ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಕೃಷ್ಣ ರೈ, ಸುಳ್ಯದ ರೋಟರಿ ಕ್ಲಬ್ ಉಪಾಧ್ಯಕ್ಷ ರಾಮ್ ಮೋಹನ್ , ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ರೊ. ಶಿವಪ್ರಸಾದ್ ಕೆ.ವಿ., ಶ್ರೀ ಶಾರದಾಂಬ ಉತ್ಸವ ಸಮಿತಿ ಗೌರವ ಸಲಹೆಗಾರರುಗಳಾದ ಎನ್. ಜಯಪ್ರಕಾಶ್ ರೈ, ಎನ್.ಎ. ರಾಮಚಂದ್ರ, ಎಂ. ವೆಂಕಪ್ಪ ಗೌಡ, ಶ್ರೀ ಶಾರದಾಂಬ ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ, ಶ್ರೀ ಶಾರದಾಂಬ ಉತ್ಸವ ಸಮಿತಿ ಕೋಶಾಧಿಕಾರಿ ಗಣೇಶ್ ಆಳ್ವ ಉಪಸ್ಥಿತರಿದ್ದರು. ಕ್ರೀಡಾ ಸಮಿತಿ ಸಂಚಾಲಕ ದೊಡ್ಡಣ್ಣ ಬರಮೇಲು ಸ್ವಾಗತಿಸಿ, ಶ್ರೀ ಶಾರದಾಂಬ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ ವಂದಿಸಿದರು.

ಈ ಸಂದರ್ಭದಲ್ಲಿ ಸುಳ್ಯದ ನಾಡಹಬ್ಬ ಶ್ರೀ ಶಾರದಾಂಬ ಸಮೂಹ ಸಮಿತಿಯ ಪದಾಧಿಕಾರಿಗಳು, ಶ್ರೀ ಭಗವತಿ ಯುವ ಸೇವಾ ಸಂಘದ ಪದಾಧಿಕಾರಿಗಳು, ಬಂಟರ ಯಾನೆ ನಾಡವರ ಸಂಘದ ಪದಾಧಿಕಾರಿಗಳು, ಲಯನ್ಸ್ ಕ್ಲಬ್ ಪದಾಧಿಕಾರಿಗಳು, ರೋಟರಿ ಕ್ಲಬ್, ರೋಟರಿ ಸಿಟಿ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕ್ರೀಡಾ ಸಂಚಾಲಕರಾಗಿರುವ ದೊಡ್ಡಣ್ಣ ಬರಮೇಲು ಅವರ ನೇತೃತ್ವದಲ್ಲಿ ಕೆಸರುಗದ್ದೆ ಕ್ರೀಡಾಕೂಟ ಜರುಗುತ್ತಿದ್ದು, ಪುರುಷರಿಗೆ, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಜರುಗುತ್ತಿದೆ.