ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದ ವಾರ್ಷಿಕ ಮಹಾಸಭೆಯು ಜು.28 ರಂದು ಮಂದಿರದ ಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಿತು.
ಭಜನಾ ಮಂದಿರದ ಅಧ್ಯಕ್ಷ ರತ್ನಾಕರ ರೈ ಅರಂಬೂರು ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ, ಕಾರ್ಯದರ್ಶಿ ಪ್ರೀತಿಕ್ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಳೆದ ವರ್ಷದ ಅಯ ವ್ಯಯದ ಲೆಕ್ಕ ಪತ್ರವನ್ನು ಮಂಡಿಸಲಾಯಿತು. ಮುಂದಿನ ವರ್ಷದ ಕಾರ್ಯಕ್ರಮದ ಆಯೋಜನೆಯ ಕುರಿತು ಚರ್ಚಿಸಲಾಯಿತು. ಸಮಿತಿಯ ಪದಾಧಿಕಾರಿಗಳು
ಮತ್ತು ಸದಸ್ಯರು ಭಾಗವಹಿಸಿದರು. ಕಾರ್ಯದರ್ಶಿ ಪ್ರೀತಿಕ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.