ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಕುರಿತ ಸಮಾಲೋಚನಾ ಸಭೆ

0

ಅನುಷ್ಠಾನ ಸಮಿತಿ ರಚನೆ


ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವುದು ಮತ್ತು ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕ ಕುರಿತು ಆರೋಗ್ಯ ಕೇಂದ್ರಕ್ಕೆ ಒಳಪಡುವ ಗ್ರಾಮ ಪಂಚಾಯತ್ ಗಳ ಅಧ್ಯಕ್ಷ, ಉಪಾಧ್ಯಕ್ಷರುಗಳ ಮತ್ತು ಸಾರ್ವಜನಿಕರ ಸಮಾಲೋಚನಾ ಸಭೆ ಜು.29 ರಂದು ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ ಸಭಾಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಮಂಜುನಾಥ , ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ , ಆರೋಗ್ಯ ಇಲಾಖೆಯ ನಿವೃತ್ತ ನಿರೀಕ್ಷಾಣಾಧಿಕಾರಿ ವಾಸುದೇವ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ವಿಳಂಬದ ಕುರಿತು ಮತ್ತು ಖಾಲಿ ಇರುವ ಹುದ್ದೆಗಳ ಕುರಿತು ಸುದೀರ್ಘ ಚರ್ಚೆಗಳು ನಡೆಯಿತು.
ಬಳಿಕ ಅನುಷ್ಠಾನ ಸಮಿತಿ ರಚಿಸಲಾಯಿತು. ಅನುಷ್ಠಾನ ಸಮಿತಿಗೆ ಮಹೇಶ್ ಕುಮಾರ್ ಕರಿಕ್ಕಳ, ಸಂತೋಷ್ ಜಾಕೆ, ಅಬ್ದುಲ್ ಗಫೂರ್, ಕಾರ್ಯಪ್ಪ ಗೌಡ ಚಿದ್ಗಲ್ಲು,ಶ್ರೀಮತಿ ಸುವರ್ಣಿನಿ ಎನ್ ಎಸ್, ಪುರುಷೋತ್ತಮ ಮುಡೂರು, ಚಿನ್ನಪ್ಪ ಸಂಕಡ್ಕ,ಲಿಗೋಧರ ಆಚಾರ್ಯ, ಸುರೇಶ್ ಕುಮಾರ್ ನಡ್ಕ,ಸವಿತಾರಾ ಮುಡೂರು, ಪುಷ್ಪ ಡಿ ಪ್ರಸಾದ್ ಕಾನತ್ತೂರ್, ದೇವಿಪ್ರಸಾದ್ ಜಾಕೆ, ವಾಸುದೇವ ನಾಯಕ್, ಆಶಿತ್ ಕಲ್ಲಾಜೆ, ಕುಸುಮಾಧರ ಕೆರೆಯಡ್ಕ ಆಯ್ಕೆಯಾದರು. ಗ್ರಾಮ ಪಂಚಾಯತ್ ಅಧ್ಯಕ್ಷರು ಖಾಯಂ ಆಹ್ವಾನಿತರು ಮತ್ತು ಅನುಷ್ಠಾನ ಸಮಿತಿಯ ಮುಂದಿನ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಮಾಡುವುದು ಎಂದು ನಿರ್ಣಾಯಿಸಲಾಯಿತು.

ಕಾರ್ಯಕ್ರಮದಲ್ಲಿ ಲಿಗೋಧರ ಆಚಾರ್ಯ ಸ್ವಾಗತಿಸಿದರು. ಚಿನ್ನಪ್ಪ ಸಂಕಡ್ಕ ಪ್ರಾಸ್ತಾವಿಕ ಮಾತನಾಡಿದರು. ಸೋಮಶೇಖರ ನೇರಳ ನಿರೂಪಿಸಿದರು ಮತ್ತು ವಂದಿಸಿದರು.