ಕುಕ್ಕೆಶ್ರೀ ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಪುಟ್ಟಣ್ಣ ವಾಲಗದಕೇರಿ ಇಂದು ಪುತ್ತೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಕೆಲ ಕಾಲದ ಅಸೌಖ್ಯತೆಯಿಂದ ಇದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು.
ಅವರಿಗೆ 43 ವರ್ಷ ವಯಸ್ಸಾಗಿತ್ತು. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ. ಮೃತರ ದೇಹವನ್ನು ಅಂಬ್ಯೂಲೆನ್ಸ್ ನಲ್ಲಿ ಸುಬ್ರಹ್ಮಣ್ಯಕ್ಕೆ ಕರೆ ತಂದಾಗ ಅಟೋ ಚಾಲಕರು ವಾಹನ ಮೆರವಣಿಗೆಯಲ್ಲಿ ಕರೆ ತರಲಾಯಿತು.