ಪೆರಾಜೆ ಶ್ರೀ ಶಾಸ್ತಾವು ದೇಗುಲದ ಬಳಿ ಕಿಂಡಿ ಅಣೆಕಟ್ಟು ಮುಳುಗಡೆ
ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಪಯಸ್ವಿನಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಬಳಿ ಕಿಂಡಿ ಅಣೆಕಟ್ಟು ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಜು.29ರಂದು ರಾತ್ರಿಯಿಂದ ಕೊಡಗು ಮತ್ತು ದಕ್ಷಿಣ ಕನ್ನಡ ಗಡಿಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಪಯಸ್ವಿನಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ.