ಸುಳ್ಯ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆ

0

ಕೂಡಲೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ನಗರ ಪಂಚಾಯತ್ ಮಾಜಿ ಅಧ್ಯಕ್ಷ ವೆಂಕಪ್ಪ ಗೌಡ ಆಗ್ರಹ

ಸುಳ್ಯ ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ಅನೇಕ ಶಾಲೆಗಳು ಹಳೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಪಾಯ ಸಂಭವಿಸುವ ಮೊದಲೇ ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಕೂಡಲೇ ರಜೆ ಘೋಷಣೆ ಆಗಬೇಕು, ಅಲ್ಲದೆ ಮಕ್ಕಳನ್ನು ಆಡಳಿತ ಮಂಡಳಿ ಹಾಗೂ ಶಿಕ್ಷಕರ ನೆರವಿನಿಂದ ಕೂಡಲೇ ಅವರವರ ಮನೆಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಎಂ ವೆಂಕಪ್ಪ ಗೌಡ ಸುದ್ದಿ ವೆಬ್ಸೈಟ್‌ಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.