ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬ

0

ಸುಳ್ಯದ ಹಳೆ ಗೇಟು ಪೆಟ್ರೋಲ್ ಬಂಕ್ ಎದುರುಗಡೆ ಹೊಳೆಗೆ ಹೋಗುವ ರಸ್ತೆಯ ಬದಿಯಲ್ಲಿ ಟ್ರಾನ್ಸ್ಫಾರ್ಮರ್ ಅಳವಡಿಸಿದ ವಿದ್ಯುತ್ ಕಂಬ ವೊಂದು ಪಕ್ಕಕ್ಕೆ ವಾಲಿದ ಸ್ಥಿತಿಯಲ್ಲಿ ಕಂಡುಬರುತ್ತಿದ್ದು ಅಪಾಯದ ಮುನ್ಸೂಚನೆ ನೀಡುತ್ತಿದೆ.

ಈ ವಿದ್ಯುತ್ ಕಂಬವು ಹೊಳೆಗೆ ಹೋಗುವ ರಸ್ತೆ ಹಾಗೂ ಕೆಲಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಇದರ ಮಧ್ಯದಲ್ಲಿದ್ದು ದಿನನಿತ್ಯ ಅದೆಷ್ಟೋ ಸಂಚರಿಸುವ ವಾಹನ ಸವಾರರು, ಪಾದಾಚಾರಿಗಳು, ಅಕ್ಕಪಕ್ಕದ ಮನೆಗಳಿಗೆ ತೊಂದರೆಯನ್ನುಂಟು ಮಾಡುವ ಸ್ಥಿತಿ ನಿರ್ಮಾಣವಾಗಿದ್ದು ಜನರು ಭಯಭೀತಗೊಂಡಿದ್ದಾರೆ.
ಕೂಡಲೇ ಸಂಬಂಧಪಟ್ಟ ಇಲಾಖೆಯವರು ಮುಂಜಾಗ್ರತಾ ಕ್ರಮವಹಿಸಿ ಮುಂಬರುವ ಅನಾಹುತವನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ವಿನಂತಿಸುತ್ತಿದ್ದಾರೆ.