ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಸಿ.ಸಿ.ಬೇಬಿ ನಿವೃತ್ತಿ – ಸನ್ಮಾನ – ಬೀಳ್ಕೊಡುಗೆ

0

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಸಿ.ಸಿ.ಬೇಬಿಯವರು ಜು.31 ರಂದು ಸೇವಾ ನಿವೃತ್ತಿಗೊಂಡಿದ್ದು ಇವರಿಗೆ ಸನ್ಮಾನ ಹಾಗೂ ಬೀಳ್ಕೊಡುವ ಕಾರ್ಯಕ್ರಮವು ಬೆಳ್ಳಾರೆ ಪ್ರಾ.ಆ.ಕೇಂದ್ರದಲ್ಲಿ ನಡೆಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ,ಪಂಜ ಪ್ರಾ.ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುನಾಥ್,ಸುಬ್ರಹ್ಮಣ್ಯ ಪ್ರಾ.ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಯವರು ಶ್ರೀಮತಿ ಬೇಬಿ ದಂಪತಿಯನ್ನು ಶಾಲು ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಿದರು.
ವೇದಿಕೆಯಲ್ಲಿ ಬೆಳ್ಳಾರೆ ಪ್ರಾ.ಆರೋಗ್ಯ ಕೇಂದ್ರದ ಡಾ.ಕಿರಣ್,ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾ, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಹಿಮಲೇಶ್ವರಿ ಉಪಸ್ಥಿತರಿದ್ದು ನಿವೃತ್ತ ಜೀವನಕ್ಕೆ ಶುಭಹಾರೈಸಿದರು.
ಸನ್ಮಾನ ಸ್ವೀಕರಿಸಿದ ಬೇಬಿಯವರು ತಾನು ಸೇವೆ ಸಲ್ಲಿಸಿದ ದಿನಗಳನ್ನು ಸ್ಮರಿಸಿಕೊಂಡು ಸಹಕರಿದವರಿಗೆ ಕೃತಜ್ಞತೆ ಸಲ್ಲಿಸಿದರು.
ಸಮುದಾಯ ಆರೋಗ್ಯ ಅಧಿಕಾರಿ ಕು.ಹವ್ಯಶ್ರೀ ಸ್ವಾಗತಿಸಿ,ಕಳಂಜ ಆಶಾ ಕಾರ್ಯಕರ್ತೆ ಜಯಂತಿ ಕೆ.ಪ್ರಾರ್ಥಿಸಿ,ಪ್ರಾ.ಆ.ಕೇಂದ್ರದ ಸುರಕ್ಷಾಧಿಕಾರಿ ಕೆ.ಸಿ.ಬೇಬಿ ಕಾರ್ಯಕ್ರಮ ನಿರೂಪಿಸಿ,ದ್ವಿ.ದ.ಸಹಾಯಕಿ ಅಖಿಲಾ ಕೆ.ಸಿ.ವಂದಿಸಿದರು.
ಆಶಾ ಕಾರ್ಯಕರ್ತೆಯರು,ಆರೋಗ್ಯ ಸಹಾಯಕಿಯರು,ಸಿಬ್ಬಂದಿ ವರ್ಗದವರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.