ಕೆವಿಜಿ ಪಾಲಿಟೆಕ್ನಿಕ್ : ಸಿವಿಲ್ ವಿಭಾಗದ ಮುಖ್ಯಸ್ಥರಾಗಿ ಹರೀಶ್ ಕುಮಾರ್ ಪಿ ನೇಮಕ

0

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಸಿವಿಲ್ ವಿಭಾಗದ ಮುಖ್ಯಸ್ಥರಾಗಿ ಉಪನ್ಯಾಸಕರಾಗಿದ್ದ ಹರೀಶ್ ಕುಮಾರ್ ಪಿ ಅವರನ್ನು ನೇಮಕ ಮಾಡಲಾಗಿದೆ.

ಹರೀಶ್ ಕುಮಾರ್ ರವರು ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಪೂಜಾರಿ ಮನೆ ಕೊರಗಪ್ಪ ಗೌಡ ಮತ್ತು ಭವಾನಿ ದಂಪತಿಗಳ ಪುತ್ರನಾಗಿದ್ದು ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರ್ಕಿಟೆಕ್ಚರ್ ವಿಷಯದಲ್ಲಿ ಬಿ.ಇ.ಪದವಿ ಪಡೆದಿದ್ದಾರೆ.
2000ನೇ ಇಸವಿಯಿಂದ ಕೆವಿಜಿ ಪಾಲಿಟೆಕ್ನಿಕ್ ನ ಸಿವಿಲ್ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು ಪ್ರಸ್ತುತ ಅವರನ್ನು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರನ್ನಾಗಿ ಎ.ಓ.ಎಲ್.ಇ ಕಮಿಟಿ “ಬಿ” ಇದರ ಅಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಯವರು ನೇಮಕಗೊಳಿಸಿದ್ದಾರೆ. ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಕೆವಿಜಿ ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ , ಪ್ರಾಂಶುಪಾಲ ಶ್ರೀಧರ್ ಎಂ ಕೆ, ಉಪ ಪ್ರಾಂಶುಪಾಲ ಅಣ್ಣಯ್ಯ ಕೆ, ನಿರ್ಗಮಿತ ವಿಭಾಗ ಮುಖ್ಯಸ್ಥ ದೇವರಾಜ ಜಿ. ಕೆ ಮೊದಲಾದವರು ಉಪಸ್ಥಿತರಿದ್ದರು