ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯ ಸುಳ್ಯ:ಅಂತಿಮ ಕಾನೂನು ಪದವಿ ವಿದ್ಯಾರ್ಥಿಗಳಿಗೆ ವಿದಾಯ ಕೂಟ ಕಾರ್ಯಕ್ರಮ

0

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯ ಸುಳ್ಯ ಇದರ ೨೦೨೩-೨೪ನೇ ಸಾಲಿನ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ಆ. ೦೧ ರಂದು ವಿದಾಯ ಕೂಟ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ ಬಿ. ವಹಿಸಿ, ಬೀಳ್ಕೋಡಲ್ಪಡುತ್ತಿರುವ ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು. ಮುಖ್ಯ ಅತಿಥಿಗಳ ನೆಲೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಹೆಚ್.ಎಸ್, ಹಿರಿಯ ಉಪನ್ಯಾಸಕರಾದ ಜಯರಾಮ್.ವೈ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಸಾಂದ್ರ. ಎ.ವಿ. ಪ್ರಾರ್ಥಿಸಿದರು. ವಿದ್ಯಾರ್ಥಿ ಜೀವಿತ್. ಕೆ.ಪಿ. ಸ್ವಾಗತಿಸಿದರು. ವಿದ್ಯಾರ್ಥಿನಿ ವಿಸ್ಮಯ ಗಂಗಮ್ಮ. ಕೆ.ಎಲ್. ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಂತರ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.