ಅರಂತೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ತೊಡಿಕಾನ ಗ್ರಾಮದ ಪರ್ನೋಜಿಯಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯಾಗಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಆ.2ರಂದು ರಾತ್ರಿ ಸಂಭವಿಸಿದೆ.
ಮರ ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮವಾಗಿ ಹಲವು ವಿದ್ಯುತ್ ಕಂಬಗಳಿಗೂ ಹಾನಿಯಾಗಿರುವುದಾಗಿ ತಿಳಿದುಬಂದಿದೆ.
ಬಳಿಕ ಸೋಮಶೇಖರ ಪೈಕ, ನವೀನ್ ಅಂಗಡಿಮಜಲು, ಶರತ್ ಮೆಸ್ಕಾಂ ಸೇರಿದಂತೆ ಅಡ್ಯಡ್ಕ ಪರಿಸರದ ನಾಗರಿಕರು ಸೇರಿ ಮರ ತೆರವುಗೊಳಿಸಲು ಸಹಕರಿಸಿದರು ಎಂದು ತಿಳಿದುಬಂದಿದೆ.