ಆ.5ರಂದು ಸರ್ಕಾರಿ ಪ್ರೌಢ ಶಾಲೆ, ಏನೆಕಲ್ ಇಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪ್ರೌಢ ಶಾಲೆ ಏನೆಕಲ್ಲು ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯ ವಿದ್ಯಾರ್ಥಿ ಶಿಶಿರ ಬಿ ಎಸ್, ತೃತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವರು ಬೆಳ್ತಂಗಡಿಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾರೆ.