ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ.ಗುತ್ತಿಗಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ, ಗ್ರಾಮ ಪಂಚಾಯತ್ ಗುತ್ತಿಗಾರು, ಪ್ರಾಥಮಿಕ ಅರೋಗ್ಯ ಕೇಂದ್ರ ಗುತ್ತಿಗಾರು.ಲ್, ಲಯನ್ಸ್ ಕ್ಲಬ್ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇವುಗಳ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರವು ಆ. 17 ರಂದು ಗುತ್ತಿಗಾರಿನ ಪ. ವರ್ಗದ ಸಭಾಭವನ ಗುತ್ತಿಗಾರು ಇಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ರಕ್ತದಾನ ಮಾಡುವ ರಕ್ತದಾನಿಗಳನ್ನು ಸನ್ಮಾನಿಸುವ ಕಾರ್ಯಕ್ರಮನ್ನು ಕೂಡ ಹಮ್ಮಿಕೊಳ್ಳಲಾಗಿದೆ. ವ್ಯವಸ್ಥೆಯ ದೃಷ್ಟಿಯಿಂದ ರಕ್ತದಾನಿಗಳು ಮೊಬೈಲ್ ಸಂಖ್ಯೆ 9480199711 ಗೆ ಕರೆ ಮಾಡಿ ನೋಂದಣಿ ಮಾಡಲು ಸಂಘಟಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.