ಯೇನೆಕಲ್ಲು ಸರಕಾರಿ ಪ್ರೌಢಶಾಲೆಯಲ್ಲಿ ಚೆಸ್ ಪಂದ್ಯಾಟ

0

ಸರಕಾರಿ ಪ್ರೌಢಶಾಲೆ ಏನೆಕಲ್ಲಿನಲ್ಲಿ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟ ಆ. 5ರಂದು ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಜಾತ ಕಲ್ಲಾಜೆ ನೆರವೇರಿಸಿದರು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಲಕ್ಷ್ಮಣ ಸಂಕಡ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಅತಿಥಿಗಳಾಗಿ ನಾಗರಾಜ ಪರಮಲೆ, ರಮೇಶ್ ಕಾಟರಾಯ ಮರ್ಕಂಜ, ತುಕಾರಾಮ ಏನೆಕಲ್ಲು, ಮೋಹನ ಕೋಟೆಗೌಡನಮನೆ ಭಾಗವಹಿಸಿದ್ದರು. ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯರು, ಶಾಲಾ ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.