ಕಲ್ಚೆರ್ಪೆ ಘನ ತ್ಯಾಜ್ಯ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕಿ ಭಾಗೀರಥಿ ಮುರುಳ್ಯ

0

ಸಭೆ ಕರೆದು ಸಮಸ್ಯೆ ಬಗೆಹರಿಸುವ ಕುರಿತು
ಶಾಸಕರಿಂದ ಆಶ್ವಾಸನೆ

ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಘನತ್ಯಾಜ್ಯ ಘಟಕದ ಅವ್ಯವಸ್ಥೆಯ ಕುರಿತು ಮಾಧ್ಯಮ ಹಾಗೂ ಪತ್ರಿಕೆಯಲ್ಲಿ ವರದಿ ಬಿತ್ತರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನಿಂದ ಆಗಮಿಸಿದ ಶಾಸಕಿ ಭಾಗೀರಥಿ ಮುರುಳ್ಯ ರವರು ಇಂದು ಖುದ್ದು ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿ ಸ್ಥಳೀಯರ ಜತೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಪರಿಸರದ ನಿವಾಸಿಗಳು ತಮ್ಮ ಅಳಲನ್ನು ತೋಡಿ ಕೊಂಡರು.
ಸ್ಥಳೀಯರ ಪರವಾಗಿ ಅಶೋಕ ಪೀಚೆಯವರು ಘನತ್ಯಾಜ್ಯ ಘಟಕದ ಅವೈಜ್ಞಾನಿಕನಿರ್ವಹಣೆಯ ಬಗ್ಗೆ ಶಾಸಕರಲ್ಲಿ ದೂರಿಕೊಂಡರು. ಈಗಾಗಲೇ ನಗರ ಪಂಚಾಯತ್ ಘಟಕಕ್ಕೆ ಪರ್ಯಾಯ ಸ್ಥಳ ಕಾಯ್ದಿರಿಸಿರುವುದಾಗಿ ತಿಳಿಸಿದ್ದಾರೆ.ಗುರುತಿಸಿದ ಜಾಗದಲ್ಲಿ ಘನತ್ಯಾಜ್ಯ ಘಟಕ ಸ್ಥಾಪಿಸಲು ಯಾಕೆ ವಿಳಂಬ ಮಾಡುತ್ತೀರಿ ಎಂದು ಪ್ರಶ್ನಿಸಿದರು. ಕಲ್ಚೆರ್ಪೆಯಿಂದ ಘನತ್ಯಾಜ್ಯ ಘಟಕವನ್ನು ಸ್ಥಳಾಂತರಿಸುವ ಮೂಲಕ ಶಾಶ್ವತ ಪರಿಹಾರದ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿದರು.
ನಗರ ಪಂಚಾಯತ್ ಮುಖ್ಯಾಧಿಕಾರಿಯವರು ಕಚೇರಿಯಲ್ಲಿ ಕುಳಿತುಕೊಂಡು ಬೇಕಾಬಿಟ್ಟಿ ಹೇಳಿಕೆ ಕೊಡುತ್ತಿದ್ದಾರೆ.


ಸ್ಥಳಕ್ಕೆ ಬಂದು ವಾಸ್ತವ ಸ್ಥಿತಿ ಅರಿತು ಬಳಿಕ ನೀವು ಹೇಳಿಕೆ ನೀಡಬೇಕು ಎಂದು ಈ ಸಂದರ್ಭದಲ್ಲಿ ಸ್ಥಳೀಯರು ಅವರನ್ನು ತರಾಟೆಗೆತ್ತಿಕೊಂಡರು.

ಸ್ಥಳೀಯ ನಿವಾಸಿಗಳ ಅಹವಾಲು ಕೇಳಿದ ಶಾಸಕರು ಮುಂದಿನ
ಆ.12 ರಂದು ಸುಳ್ಯದಲ್ಲಿ ನಿಮ್ಮೆಲ್ಲರ ಸಮ್ಮುಖದಲ್ಲಿ ಸಭೆ ಕರೆದು ಸಂಬಂಧ ಪಟ್ಟ ವಾರ್ಡ್ ಸದಸ್ಯರ ಹಾಗೂಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರದ ವ್ಯವಸ್ಥೆ ಮಾಡುವ ಬಗ್ಗೆ ಆಶ್ವಾಸನೆ ನೀಡಿರುವುದಾಗಿ ತಿಳಿದು ಬಂದಿದೆ.