ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆ.ವಿ.ಜಿ ಸಂಸ್ಮರಣೆ

0

ಸುಳ್ಯದ ಅಮರಶಿಲ್ಪಿ ದಿ. ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆ.ವಿ.ಜಿ ಯವರ ಪುಣ್ಯಸ್ಮರಣಾ ಕಾರ್ಯಕ್ರಮವು ಇಂದು ನೆರವೇರಿತು.
ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ಕೆ.ವಿ.ಜಿ ಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ. ರೈ ಮತ್ತು ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.