ಡಾ. ಕುರುಂಜಿಯವರ 11ನೇ ಪುಣ್ಯತಿಥಿಯ ಅಂಗವಾಗಿ ಕೆ.ವಿ.ಜಿ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಪುಣ್ಯಸ್ಮರಣೆ

0

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರ ಪೂಜ್ಯ ಡಾ. ಕುರುಂಜಿ ವೆಂಕಟ್ರಮಣಗೌಡರ ೧೧ನೇ ಪುಣ್ಯ ಸ್ಮರಣೆಯಕಾರ್ಯಕ್ರಮವುಕೆ.ವಿ.ಜಿ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್& ಇಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್‌ಯು.ಜೆ. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ
ಡಾ. ಸುರೇಶ ವಿ., ಉಪ-ಪ್ರಾಂಶುಪಾಲರಾದ ಡಾ. ಶ್ರೀಧರ ಕೆ.,ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರುಗಳು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.