ಕೆವಿಜಿ ಐಪಿಎಸ್ ನಲ್ಲಿ ಜೆ ಇ ಇ ಮತ್ತು ನೀಟ್ ತರಗತಿಗಳ ಉದ್ಘಾಟನಾ ಸಮಾರಂಭ

0

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜೆಇಇ ಮತ್ತು ನೀಟ್ ತರಗತಿಗಳನ್ನು ಅ. 7 ರಂದು ಉದ್ಘಾಟಿಸಲಾಯಿತು.


ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ.ವಿ ಮತ್ತು ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಶುಭ ಹಾರೈಸಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿರುವ ಕೆ.ವಿ.ಜಿ ಅಮರ ಜ್ಯೋತಿ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ ಮಾತನಾಡುತ್ತಾ ‘ನಿಮ್ಮ ವಿದ್ಯಾಭ್ಯಾಸದಲ್ಲಿ ಇದೊಂದು ಹೊಸ ಆರಂಭ. ಇದರಿಂದ ನಿಮ್ಮ ಭವಿಷ್ಯದಲ್ಲಿ ನಿಮ್ಮ ಬುದ್ಧಿವಂತಿಕೆ, ಸಾಮರ್ಥ್ಯ ಹೆಚ್ಚಾಗಿ ನಿಮ್ಮ ಗುರಿ ಮುಟ್ಟಲು ಸುಲಭ ಸಾಧ್ಯವಾಗುತ್ತದೆ. ನಿಮ್ಮ ಶಾಲಾ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ಸೇರಿ ಉತ್ತಮ ಅವಕಾಶವನ್ನು ನಿಮಗೆ ಕೊಟ್ಟಿದ್ದಾರೆ. ಅದನ್ನು ಸದುಪಯೋಗಪಡಿಸಿಕೊಳ್ಳಿ’ ಹೇಳಿದರು.

ಬಳಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು. ಜೆ ‘ ಕೇಂದ್ರೀಯ ಪಠ್ಯಕ್ರಮದ ಶಾಲೆಯು ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರು ಮಾಡುತ್ತದೆ. ನಿಮ್ಮ ಗುರಿ ತಲುಪಲು ಈ ಹಂತದಲ್ಲಿ ಚೆನ್ನಾಗಿ ಕಲಿಯಿರಿ. ನಮ್ಮ ಸಹಕಾರ ನಿಮಗೆ ಯಾವಾಗಲೂ ಇರುತ್ತದೆ’ ಎಂದು ತಿಳಿಸಿದರು.

ಬಳಿಕ ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಭವ್ಯ ಸಿ.ಟಿ ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಹಂತದಲ್ಲಿ ಜೆಇ ಇ ಮತ್ತು ನೀಟ್ ತರಗತಿಗಳ ಅವಶ್ಯಕತೆಗಳ ಕುರಿತು ಸಂಕ್ಷಿಪ್ತವಾಗಿ ತಿಳಿಸಿದರು. 9ನೇ ತರಗತಿಯ ಶಮ್ಯ ಕಾರ್ಯಕ್ರಮ ನಿರೂಪಿಸಿ ಅಬ್ದುಲ್ ಮನನ್ ವಂದಿಸಿದರು. ಕಾರ್ಯಕ್ರಮದಲ್ಲಿ ಕೆವಿಜಿ ಐಪಿಎಸ್ ನ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ದೀಪಕ್ ವೈ ಆರ್, ಕೆವಿಜಿ ಡೆಂಟಲ್ ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ಶೈಲಾ, ಕೆ ಜಿ ಐ ಪಿ ಎಸ್ ನ ಆಡಳಿತ ಸಂಯೋಜನಾಧಿಕಾರಿ ರೇಣುಕಾ ಉತ್ತಪ್ಪ, ಶಾಲಾ ಪ್ರಚಾರ ಸಂಯೋಜನಾಧಿಕಾರಿ ಸುಜಿತ್, ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ಉಪನ್ಯಾಸಕರು, ಕೆವಿಜಿ ಐಪಿಎಸ್ ನ ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಎಂಟನೇ ತರಗತಿಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.