ಮಂಡ್ಯ: ಬಿಜೆಪಿ – ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ

0

ಪಾದಯಾತ್ರೆಯಲ್ಲಿ ನಾಯಕರೊಂದಿಗೆ ಹೆಜ್ಜೆ ಹಾಕಿದ ಸುಳ್ಯದ ನೂರಾರು ನಾಯಕರು ಮತ್ತು ಕಾರ್ಯಕರ್ತರು

ಬಿ.ವೈ. ವಿಜಯೇಂದ್ರ – ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ಉಪಸ್ಥಿತಿ

ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಮುಡಾ , ವಾಲ್ಮಿಕಿ ನಿಗಮದ ಹಗರಣ ಸೇರಿದಂತೆ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಬೆಗಳೂರಿನಿಂದ ಮೈಸೂರಿಗೆ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯು ಐದನೇ ದಿನವಾದ ಆ.7ರಂದು ಸಕ್ಕರೆ ನಾಡು ಮಂಡ್ಯಕ್ಕೆ ತಲುಪಿದ್ದು, ಮಂಡ್ಯದಲ್ಲಿ ದೋಸ್ತಿ ಪಕ್ಷದ ವತಿಯಿಂದ ಜಂಟಿಯಾಗಿ ಬೃಹತ್ ಬಹಿರಂಗ ಸಮಾವೇಶ ನಡೆಯಿತು.

ಈ ಮೈಸೂರು ಚಲೋ ಪಾದಯಾತ್ರೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಆರ್. ಅಶೋಕ್, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ರಾಜ್ಯದ ಬಿಜೆಪಿ – ಜೆಡಿಎಸ್ ಪಕ್ಷದ ನಾಯಕರುಗಳ ಜೊತೆಗೆ ದ.ಕ. ಜಿಲ್ಲೆಯ ಪ್ರತೀ ವಿಧಾನಸಭಾ ಕ್ಷೇತ್ರದಿಂದ ಸ್ಥಳೀಯ ಮುಖಂಡರು ಹಾಗೂ ಸಾವಿರಾರು ಮಂದಿ ಕಾರ್ಯಕರ್ತರು ಮಂಡ್ಯದಲ್ಲಿ ಭಾಗವಹಿಸಿದ್ದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್. ಅಂಗಾರ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಹಿಂದೂ ಮುಖಂಡ ಕುಮಾರ್ ಪುತ್ತಿಲ, ಮಂಗಳೂರು ಮೇಯರ್ ಸುಧೀರ್ ಕುಮಾರ್ ಕಣ್ಣೂರು, ದ.ಕ. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ನಾಯಕರುಗಳಾದ ಎ.ವಿ. ತೀರ್ಥರಾಮ, ವಿನಯ ಕುಮಾರ್ ಮುಳುಗಾಡು, ವಿನಯಕುಮಾರ್ ಕಂದಡ್ಕ, ವೆಂಕಟ್ ದಂಬೆಕೋಡಿ, ಸಂತೋಷ್ ಕುತ್ತಮೊಟ್ಟೆ, ಬೂಡು ರಾಧಾಕೃಷ್ಣ ರೈ, ದಯಾನಂದ ಕುರುಂಜಿ, ಕೆ.ಎಂ. ಬಾಬು ಕದಿಕಡ್ಕ, ಕೇಶವ ಅಡ್ತಲೆ, ಚಂದ್ರಹಾಸ ಶಿವಾಲ, ಶ್ರೀಧರ ಕುತ್ಯಾಳ, ಪ್ರಸನ್ನ ದರ್ಬೆ,ಮಾದವ ಚಾಂತಾಳ, ಸುನಿಲ್ ಕೇರ್ಪಳ, ಜಗನ್ನಾಥ ಜಯನಗರ, ಹೇಮಂತ್ ಮಠ, ಎ.ಟಿ. ಕುಸುಮಾಧರ, ನಾಗೇಶ್ ಕುಂದಲ್ಪಾಡಿ, ಉದಯ ಕುಂಬಳಚೇರಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಇಂದಿರಾ ಬಿ.ಕೆ. , ಶ್ರೀಮತಿ ಪುಷ್ಪಾ ಮೇದಪ್ಪ, ಶ್ರೀಮತಿ ಗುಣವತಿ ಕೊಲ್ಲಂತಡ್ಕ, ಶ್ರೀಮತಿ ಶಶಿಕಲಾ ನೀರಬಿದಿರೆ, ಸುದರ್ಶನ ಪಾತಿಕಲ್ಲು ಸೇರಿದಂತೆ ಸುಳ್ಯ ವಿಧಾನಸಭಾ ಕ್ಷೇತ್ರದ ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.